ಚಿತ್ರ: ದೇವಳದ ಸಿಬ್ಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಊರಿನ ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ಉಜಿರೆ: ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹದ ಅಂಗವಾಗಿ ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದೇವಳದ ಸಿಬ್ಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಊರಿನ ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ 7 ರಿಂದ 13ರ ವರೆಗೆ ಮಂದಿರ, ಚರ್ಚ್, ಮಂದಿರ, ಬಸದಿ, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗಿದೆ. ರಾಜ್ಯದೆಲ್ಲೆಡೆ 16,529 ಶ್ರದ್ಧಾಕೇಂದ್ರಗಳನ್ನು ಗುರುತಿಸಿದ್ದು, 4,13,010 ಮಂದಿ ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.
ಕಳೆದ 8 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ, ಸ್ವಾತಂತ್ರö್ಯ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗುತ್ತದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ