ಹೊಸದಿಲ್ಲಿ: ದೆಹಲಿಯ ಬಿಜೆಪಿಯಲ್ಲಿ ಗುರುವಾರ ನಡದ ಸರಳ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ನಾಯಕರು ಬರ ಮಾಡಿಕೊಂಡರು. ಈ ವೇಳೆ ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಲಕ್ಷ್ಮಣ ಸವದಿ ಅವರು ಸಹ ಬಿಜೆಪಿಗೆ ವಾಪಸ್ ಆಗುತ್ತಾರಾ ಎನ್ನುವ ಚರ್ಚೆಗಳು ನಡೆದಿದ್ದು, ಈ ಬಗ್ಗೆ ಸ್ವತಃ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.
ಮತ್ತೆ ಬಿಜೆಪಿ ಸೇರ್ಪಡೆಯ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ ನಾನು ಮತ್ತೆ ಬಿಜೆಪಿಗೆ ಹೋಗುವುದಿಲ್ಲ. ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಿದ್ದು ಏಕೆಂದು ಗೊತ್ತಿಲ್ಲ. ಶೆಟ್ಟರ್ ಬಿಜೆಪಿಗೆ ಹೋಗಿದ್ದರಿಂದ ಕಾಂಗ್ರೆಸ್ ಗೆ ಹಾನಿ ಆಗದು. ರಾಷ್ಟ್ರೀಯ ಪಕ್ಷಗಳು ಎಂದೂ ಒಬ್ಬರ ಮೇಲೆ ಅವಲಂಬಿತವಾಗಿಲ್ಲ. ಶೆಟ್ಟರ್ ರಾಜೀನಾಮೆ ನೀಡಿದ್ದು ವೈಯಕ್ತಿಕ, ಈ ಬಗ್ಗೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


