ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಭೋಜನ ವಿತರಣೆ

Upayuktha
0



ಬೆಂಗಳೂರು : ಇಲ್ಲಿನ ಯಲಹಂಕದ ಶ್ರೀ ಜ್ಞಾನಶಕ್ತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆ ವತಿಯಿಂದ ಭೋಜನ ವಿತರಣೆ ಮಾಡಲಾಯಿತು, 120 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿದ್ದರು. ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ, ಶಾಲಾ ಸಮವಸ್ತ್ರಗಳ ವಿತರಣೆ ಮಾಡುವುದು ಈ ರೀತಿ ನಿರಂತರವಾಗಿ ಸಮಾಜಮುಖಿ ಕಾರ್ಯ ಮಾಡುತ್ತಿದೆ.



 ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರು ಪ್ರತಿಕ್ರಿಯಿಸಿ `ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆಯಿಂದ ನಮ್ಮ ಶಾಲೆಗೆ ಆಗಮಿಸಿ ಪ್ರೀತಿಯಿಂದ ಎಲ್ಲಾ ಮಕ್ಕಳಿಗೆ ಊಟವನ್ನು ಬಡಿಸಿ ಸಹಕರಿದರು, ಇಂತಹ ಸಹಕಾರಪೂರ್ವ ಮನೋಭಾವನೆಯನ್ನು ಹಂಚಿಕೊಂಡಿರುವುದಕ್ಕಾಗಿ ಶಾಲೆಯ ವತಿಯಿಂದ ಧನ್ಯವಾದಗಳು, ತಮ್ಮ ಸಹಕಾರ ನಮ್ಮೊಂದಿಗೆ ಇರಲಿ' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಈ ಸಂಧರ್ಭದಲ್ಲಿ ಶ್ರೀ ಜ್ಞಾನಶಕ್ತಿ ವಿದ್ಯಾ ಮಂದಿರದ ಶಿಕ್ಷಕ ವೃಂದದವರು, ಶಾಲಾ ವಿದ್ಯಾರ್ಥಿಗಳು ಮತ್ತು  ಶ್ರೀ ಸಿದ್ದೇಶ್ವರ ಧರ್ಮಜಾಗೃತಿ ಸಂಸ್ಥೆಯ ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top