ಸುರತ್ಕಲ್ : ಕರ್ನಾಟಕ ಸರ್ಕಾರದ ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಮೇಳದ ಅಂಗವಾಗಿ ಗೋವಿಂದ ದಾಸ ಕಾಲೇಜಿನ ವೃತ್ತಿಮಾರ್ಗದರ್ಶನ ಕೋಶದ ಮೂಲಕ ಕಾಲೇಜಿನ ಅರ್ಹ ಪದವೀಧರ ವಿದ್ಯಾರ್ಥಿಗಳ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ.ಹರೀಶ್ ಆಚಾರ್ಯ ಮತ್ತು ನೀಲಪ್ಪ ವಿ., ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ವೃತ್ತಿ ಮಾರ್ಗದರ್ಶನ ಕೋಶದ ಸಂಯೋಜಕ ಪ್ರೊ.ವಾಮನ್ ಕಾಮತ್, ಉಪನ್ಯಾಸಕರಾದ ಕ್ಯಾಪ್ಟನ್ ಡಾ.ಸುಧಾ ಯು., ಹರಿಣಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ