ಧರ್ಮಸ್ಥಳದಲ್ಲಿ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Upayuktha
0



ಧರ್ಮಸ್ಥಳಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ಮಧ್ಯೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರಕ್ಕೆ  ಸಹಿ ಮಾಡಿ ಒಪ್ಪಿಗೆ ಸೂಚಿಸಲಾಯಿತು.



ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‍ನ ಸಹಾಯಕ ನಿರ್ದೇಶಕ ಡಾ. ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ. ಪ್ರಸನ್ನ ಎನ್. ರಾವ್, ಉಪಪ್ರಾಂಶುಪಾಲರಾದ ಡಾ. ಶೈಲಜಾ, ಯು.,  ಸಂಹಿತಾ ಸಿದ್ಧಾಂತ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀನಾಥ ವೈದ್ಯ, ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಅಶ್ವಿನಿಕುಮಾರ್ ಎಂ. ಮತ್ತು ಸಂಹಿತಾ ಸಿದ್ಧಾಂತ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
To Top