ಹಾಸನ: ಮಕ್ಕಳ ಶೈಕ್ಷಣಿಕ ಫಲಿತಾಂಶದಲ್ಲಿ ಶಿಕ್ಷಕರ ಮತ್ತು ಪೋಷಕರ ಪರಿಶ್ರಮ ಶ್ಲಾಘನೀಯವಾದುದು. ಮಕ್ಕಳು ಬೆಳಿಗ್ಗೆಯಿಂದ ಹಿಡಿದು ರಾತ್ರಿ ಮಲಗುವ ತನಕ ಕ್ರಿಯಾಶೀಲತೆಯಿಂದ ವೇಳಾಪಟ್ಟಿಯನ್ನು ಹಾಕಿಕೊಂಡು ಅಧ್ಯಯನ ಮಾಡಬೇಕು. ಇದು ಮಕ್ಕಳ ಶೈಕ್ಷಣಿಕ ಸಾಧನೆಗೆ ದಾಖಲೆಯ ಯಶೋಗಾಥೆಯಾಗುತ್ತದೆ ಎಂದು ಹಾಸನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃಧಿ) ಆದ ಹೆಚ್ ಕೆ. ಪುಷ್ಪಲತಾ ರವರು ಹೇಳಿದರು.
ನಗರದ ಹಾಸನಾಂಭ ಕಲಾಭವನದಲ್ಲಿ ಜಿಜಿಜೆಸಿ ಪ್ರಧಾನ ಪ್ರೌಢಶಾಲೆಯ ಪ್ರಧಾನೋತ್ಸವ - ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿದ ಅವರು ಪ್ರಧಾನ ಶಾಲೆಯಲ್ಲಿ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕರೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಇಂದು ನಗರದ ಕಲಾಭವನದಲ್ಲಿ ಏರ್ಪಡಿಸಿರುವ ಪ್ರಧಾನೋತ್ಸವ ಕಾರ್ಯಕ್ರಮವೇ ಸಾಕ್ಷಿಯಾಗಿದೆ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೆ ನಮ್ಮೆಲ್ಲರ ಮೂಲ ಆಶಯವಾಗಿರುವುದರಿಂದ ಪೋಷಕರು ಮಕ್ಕಳನ್ನು ಓದಿಸುವ ಕಡೆಗೆ ಹೆಚ್ಚು ಗಮನ ಹರಿಸಬೇಕು. ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಶಿಕ್ಷಕರು ಉತ್ತಮ ವೇದಿಕೆಯನ್ನು ಒದಗಿಸಿದ್ದಾರೆ. ಈ ಮೂಲಕ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಅವಕಾಶ ಒದಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಹಾಸನ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಆದ ಎಸ್. ಟಿ. ಜವರೇಗೌಡ ರವರು ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲಾ ಪೋಷಕರು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ. ಪೋಷಕರು ಮಕ್ಕಳ ಓದಿಗೆ ಹೆಚ್ಚು ಒತ್ತು ನೀಡಬೇಕು. ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿವೆ. ಮಕ್ಕಳು ಮೊಬೈಲ್ ಬಳಕೆಯನ್ನು ನಿಲ್ಲಿಸಿ ತಮ್ಮ ಅಧ್ಯಯನದ ಕಡೆ ಹೆಚ್ಚು ಗಮನ ನೀಡಿ ಪರೀಕ್ಷಾ ಸಿದ್ಧತೆ ಮಾಡಿಕೊಳ್ಳಬೇಕು. ಆ ಮೂಲಕ ಶಾಲೆಗೂ ಪೋಷಕರಿಗೂ ಉತ್ತಮ ಫಲಿತಾಂಶವನ್ನು ನೀಡಬೇಕು ಎಂದು ಹೇಳಿದರು.
ಶಿಕ್ಷಣಾಧಿಕಾರಿಗಳಾದ ಮೋಹನ್ ಕುಮಾರ್ ಮತ್ತು ಜೆ.ಬಿ. ತಮ್ಮಣ್ಣಗೌಡರು ಕಾರ್ಯಕ್ರಮ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಮಂಜುನಾಥ್ ರವರು ಎಲ್ಲ ಅತಿಥಿಗಳನ್ನು ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ. ಎನ್. ಮಂಜುಳ ರವರು ಮತ್ತು ಶಾಲೆಯ ಶಿಕ್ಷಕರಾದ ಜಿ.ಆರ್. ಶೇಷಗಿರಿ, ಹೆಚ್. ಪಿ. ಮಂಜುಳ, ಎ.ವಿ.ಗೀತಾರಾಣಿ , ಎಂ.ಆರ್.ರಂಗಾಮಣಿ, ಕೆ. ಎನ್. ಚಿದಾನಂದ, ಎಸ್.ಕೆ.ಪೂರ್ಣಿಮಾ, ಪಿ. ಮಧು , ಸತ್ಯನಾರಾಯಣ ಮುರಳಿ, ಕೇಶವಮೂರ್ತಿ , ಚಿದಾನಂದ, ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ