ಸೂಪರ್ ಪವರ್ ಆಗುವತ್ತ ಭಾರತ ದಾಪುಗಾಲು: ರಾಜೇಶ್ ನಾಯಕ್

Upayuktha
0



ಬಂಟ್ವಾಳ:  ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸೂಪರ್ ಪವರ್ ಆಗುವತ್ತ ದಾಪುಗಾಲಿಡುತ್ತಿದೆ. ಜಗತ್ತಿನ ಆರ್ಥಿಕವಾಗಿ ಬಲಿಷ್ಠ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನದತ್ತ ಸಾಗುತ್ತಿದ್ದು, ಸರ್ಕಾರದ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ತಲುಪಿದರೆ ಇನ್ನು 25 ವರ್ಷಗಳಲ್ಲಿ ಭಾರತ ಸೂಪರ್ ಪವರ್ ಆಗಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.




 ಅವರು  ಬಡಕಗಬೆಳ್ಳೂರು ಗ್ರಾಮ ಪಂಚಾಯತ್, ಬ್ಯಾಂಕ್ ಆಫ್ ಬರೋಡ, ಪೊಳಲಿ ಇವರ ಸಹಯೋಗದಲ್ಲಿ  ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಯನ್ನು ಕೂಡ ತಲುಪಬೇಕು ಅನ್ನುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನಗಳು ದೇಶಾದ್ಯಂತ ಎಲ್ಲಾ ಪಂಚಾಯಿತಿಗಳನ್ನು ತಲುಪುತ್ತಿದ್ದು ಜನರು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

 



ಬ್ಯಾಂಕ್ ಆಫ್ ಬರೋಡದ ಜನರಲ್ ಮ್ಯಾನೇಜರ್,  ಜಯಶ್ರೀ ಮಾತನಾಡಿ, ಜನರು ಯೋಜನೆಗಳ  ಸವಲತ್ತುಗಳನ್ನು ಪಡೆದುಕೊಂಡು ಅಭಿವೃದ್ಧಿ ಸಾಧಿಸಬೇಕೆಂದು ಕರೆ ನೀಡಿದರು.




 ಬಡಗಬೆಳ್ಳೂರು ಪಂಚಾಯತ್ ಅಧ್ಯಕ್ಷರಾದ ರೂಪಾಶ್ರೀ,  ನವದೆಹಲಿಯಿಂದ ಆಗಮಿಸಿದ ಡೆಪ್ಯುಟಿ ಸೆಕ್ರೆಟರಿ, ಗುರು ದೀಪ್ ಸಿಂಗ್, ನಬಾರ್ಡ್ ನ ಡಿಡಿಎಂ  ಮಾಲಿನಿ ಸುವರ್ಣ, ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕ, ಎರವನ್ ರೆಡ್ಡಿ, ಬ್ಯಾಂಕ್ ಆಫ್ ಬರೋಡದ ಡಿಜಿಎಂ ಅಶ್ವಿನ್ ಕುಮಾರ್, ಪ್ರಾದೇಶಿಕ ವ್ಯವಸ್ಥಾಪಕ ಎಸ್ ಎಸ್ ಪ್ರಸಾದ್, ಎಲ್‌ಡಿಎಂ, ಕವಿತಾ ಶೆಟ್ಟಿ, ಪಂಚಾಯತ್  ಸದಸ್ಯರು,  ಜನಪ್ರತಿನಿಧಿಗಳು ಬ್ಯಾಂಕ್ ಆಫ್ ಬರೋಡ ಪೊಳಲಿಯ ಪ್ರಬಂಧಕರಾದ ನಿತಿನ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ ಪೂಜಾರಿ, ವಿವಿಧ ಇಲಾಖೆಗಳು ಹಾಗೂ ಬ್ಯಾಂಕಿನ ಅಧಿಕಾರಿಗಳು ಭಾಗವಹಿಸಿದ್ದರು.




 ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.  ಬ್ಯಾಂಕಿನ ಮೂಲಕ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಎಫ್ ಎಲ್ ಸಿ ಅನುಷಾ ಮಾಹಿತಿ ನೀಡಿದರು. ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ನೀಡಲಾಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಫಲಾನುಭವಿಗಳು ತಮ್ಮ ಅನುಭವ ಹಂಚಿಕೊಂಡರು. ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಫ್ ಎಲ್ ಸಿ ಲತೇಶ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top