ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮದು: ಪ್ರೊ. ವಿಷ್ಣುಗಣಪತಿ ಭಟ್

Upayuktha
0



ಪುತ್ತೂರು: ಮತದಾನಕ್ಕಿಂತ ಹೆಚ್ಚು ಯಾವುದು ಇಲ್ಲ, ನಾನು ಖಂಡಿತವಾಗಿಯೂ ಮತದಾನ ಮಾಡುತ್ತೇನೆ ಎಂಬ ಪರಿಕಲ್ಪನೆಯೊಂದಿಗೆ ಈ ಬಾರಿಯ ಮತದಾರರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಅಲ್ಲದೆ ಇದು ನಮ್ಮ ಹಕ್ಕು ಕೂಡ. ದೇಶದ ಭವಿಷ್ಯಕ್ಕಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಮತದಾನ ಮಾಡುವುದು ತುಂಬಾ ಅಗತ್ಯ ಎಂದು ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್ ಹೇಳಿದರು.



ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಹಾಗೂ ಪೊಲಿಟಿಕಲ್ ಫಾರಂ ಇದರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.  



ಈ ಸಂದರ್ಭದಲ್ಲಿ ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ.ವಿಜಯ ಸರಸ್ವತಿ ಬಿ ಬೋಧಿಸಿದರು.



ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್ ವಂದಿಸಿದರು. ವಿದ್ಯಾರ್ಥಿ ವರುಣ್ ಕಾರ್ಯಕ್ರಮ ನಿರೂಪಿಸಿದರು.




Post a Comment

0 Comments
Post a Comment (0)
To Top