ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಬಿಸಿಎ ವಿದ್ಯಾರ್ಥಿನಿ ಎನ್ ಸಿಸಿ ಕೆಡೆಟ್ JUO (ಜ್ಯೂನಿಯರ್ ಅಂಡರ್ ಆಫೀಸರ್) ತೇಜಸ್ವಿನಿ.ವಿ ಶೆಟ್ಟಿ ಜನವರಿ 26ರಂದು ದಿಲ್ಲಿಯ ಕರ್ತವ್ಯಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ.
ಇವರು ಅಕ್ಟೋಬರ್ ನಿಂದ ಜನವರಿಯವರೆಗೆ ನಡೆದ ವಿವಿಧ ಎಂಟು ಪೂರ್ವ ಸಿದ್ಧತಾ ಸುತ್ತನ್ನು ಯಶಸ್ವಿಯಾಗಿ ಪೂರೈಸಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೆಟ್‍ನ ಮಡಿಕೇರಿ ಬೆಟಾಲಿಯನ್ ಇದರ ಪ್ರತಿನಿಧಿಯಾಗಿ ಪ್ರಧಾನಿ ಮತ್ತು ಇತರ ಗಣ್ಯರು ಭಾಗವಹಿಸುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ.
ಇವರು ಪುತ್ತೂರಿನ ಬನ್ನೂರು ನಿವಾಸಿಗಳಾದ ವಿವೇಕಾನಂದ ಶೆಟ್ಟಿ ಮತ್ತು ಮಮತಾ ಶೆಟ್ಟಿ ದಂಪತಿಯ ಪುತ್ರಿ. ಇವರಿಗೆ ಕಾಲೇಜಿನ ಎನ್‍ಸಿಸಿ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಅವರು ವಿವಿಧ ಹಂತದಲ್ಲಿ ಮಾರ್ಗದರ್ಶನವನ್ನು ನೀಡಿದ್ದಾರೆ. ಕಾಲೇಜಿಗೆ ಕೀರ್ತಿಯನ್ನು ತಂದ ತೇಜಸ್ವಿನಿ ಶೆಟ್ಟಿಯವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಹಾಗೂ ಅಧ್ಯಾಪಕೇತರ ಬಂಧುಗಳು ಶುಭಹಾರೈಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


