ನಿಟ್ಟೆ: ಕಾರ್ಕಳ ತಾಲೂಕಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ ವಿಭಾಗವು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಿಬ್ಬಂದಿ ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ಜನವರಿ 8 ರಿಂದ 12 ರವರೆಗೆ ಸೈಬರ್ ಭದ್ರತೆಗಾಗಿ ಮೆಷಿನ್ ಲರ್ನಿಂಗ್ ಮತ್ತು ಡೀಪ್ ಲರ್ನಿಂಗ್ ತಂತ್ರಗಳು ಎಂಬ ವಿಷಯದ ಕುರಿತು ಐದು ದಿನಗಳ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮವನ್ನು (ಎಪ್‌ಡಿಪಿ) ಆಯೋಜಿಸಿದೆ.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪುದುಚೇರಿಯಲ್ಲಿನ ಪುದುಚೇರಿ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ಮೋಹನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಪ್ರಸ್ತುತ ಯುಗದಲ್ಲಿ ಸೈಬರ್ ಭದ್ರತಾ ಕ್ರಮಗಳನ್ನು ಹೆಚ್ಚಿಸುವಲ್ಲಿ ಮೆಷಿನ್ ಲರ್ನಿಂಗ್ ಮತ್ತು ಡೀಪ್ ಲರ್ನಿಂಗ್ ತಂತ್ರಗಳ ಮಹತ್ವವನ್ನು ತಿಳಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಂತ್ರಜ್ಞಾನದ ವಿಕಸನ ಮತ್ತು ಡಿಜಿಟಲ್ ಯುಗದ ಸವಾಲುಗಳಿಗೆ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ಶೈಕ್ಷಣಿಕ ಸಂಸ್ಥೆಗಳ ನಿರ್ಣಾಯಕ ಪಾತ್ರದ ಬಗ್ಗೆ ಒಳನೋಟಗಳನ್ನು ಹಂಚಿಕೊಂಡರು.
ಇನ್ಫೋರ್ಮೇಶನ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ.ಅಶ್ವಿನಿ ಬಿ ಸ್ವಾಗತಿಸಿ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮದ ಸಂಕ್ಷಿಪ್ತ ಅವಲೋಕನ ನೀಡಿದರು. ವಿಭಾಗದ ಸಹಪ್ರಾಧ್ಯಾಪಕ ಡಾ.ವಾಸುದೇವ ಅವರು ಡಾ.ಎಸ್.ಮೋಹನ್ ಅವರನ್ನು ಪರಿಚಯಿಸಿ, ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ವಿವರಿಸಿದರು. ಕಾರ್ಯಾಗಾರದ ಸಂಯೋಜಕಿ ಡಾ.ಮಂಜುಳಾ ಗುರುರಾಜ್ ರಾವ್ ವಂದಿಸಿದರು. ವಿಭಾಗದ ಸಹಪ್ರಾಧ್ಯಾಪಕಿ ಡಾ.ಉಷಾ ದಿವಾಕರ್ ಕಾರ್ಯಕ್ರಮ ಸಂಯೋಜಿಸಿದರು. ಸಹಾಯಕ ಪ್ರಾಧ್ಯಾಪಕಿ ಚಿನ್ಮಯಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ