ಮಂಗಳೂರು: ಭರತಾಂಜಲಿ ರಿ.ಕೊಟ್ಟಾರ ಮಂಗಳೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ನಗರದ ಪುರಭವನದಲ್ಲಿ ಜ.27 ಶನಿವಾರ ಸಂಜೆ 5ರಿಂದ ನೃತ್ಯಾಮೃತಂ 2024 ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜಿಲ್ಲೆಯ ಪ್ರತಿಷ್ಠಿತ ನೃತ್ಯ ಸಂಸ್ಥೆಗಳಾದ ನಾಟ್ಯ ನಿಕೇತನ (ರಿ) ಕೊಲ್ಯ, ಸನಾತನ ನಾಟ್ಯಾಲಯ (ರಿ) ಮಂಗಳೂರು, ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಕಲ್ಲಡ್ಕ, ನೃತ್ಯ ಸುಧಾ (ರಿ) ಮೇರಿಹಿಲ್, ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ) ಪುತ್ತೂರು ಸಂಸ್ಥೆಗಳ ಕಲಾವಿದರುಗಳಿಂದ ಸಮೂಹ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಪಿ. ಬಿ ಹರೀಶ್ ರೈ ಮಾಡಲಿರುವರು. ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಭರತಾಂಜಲಿಯ ನೃತ್ಯ ಗುರುಗಳಾದ ವಿದುಷಿ ಪ್ರತಿಮಾ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


