ಗೌತಮಪುರ : ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರದಲ್ಲಿ ರಾಷ್ಟ್ರೀಯ ಹೆಣ್ಣುಮಗುವಿನ ದಿನಾಚರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಹಾಗೂ ಆರೋಗ್ಯಾಧಿಕಾರಿಯಾದ ಡಾ.ಉಲ್ಲಾಸ್ ಮಾತನಾಡಿ "ಹೆಣ್ಣು ಮಕ್ಕಳ ರಕ್ಷಣೆ ನಮ್ಮ ಮೊದಲ ಆದ್ಯತೆ ಆಗಬೇಕು, ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಅಧಿಕವಾಗಿದ್ದು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳು ಮುಂದಾಗಬೇಕು ಮತ್ತು ಹೆಣ್ಣು ಮಕ್ಕಳಿಗೆ ಅವರ ಆರೋಗ್ಯ ಮತ್ತು ಶಿಕ್ಷಣದ ಕುರಿತು ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ ಈ ನಿಟ್ಟಿನಲ್ಲಿ ನಾವೆಲ್ಲ ಕಾರ್ಯಪ್ರವೃತರಾಗಬೇಕು" ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ತಾಯಂದಿರಿಗೆ ವಿಶೇಷವಾಗಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌತಮಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗಂಗಮ್ಮ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಗೌತಮಪುರ ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


