ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಜಾಲ್ ಪಡ್ಪು ಇಲ್ಲಿನ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಎರಡು ನೂತನ ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
2022-23ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದೆ.
ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದೆಯೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಹಂತ ಹಂತವಾಗಿ ಅವೆಲ್ಲವೂ ಅನುಷ್ಠಾನಕ್ಕೆ ಬರಲಿವೆ ಎಂದು ಶಾಸಕರು ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


