ಮಂಗಳೂರು: ಮಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ನಗರದ ಟೌನ್ಹಾಲ್ನಿಂದ ಟಿಎಂಎ ಪೈ ಹಾಲ್ವರೆಗೂ ವಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದರ ಅಂಗವಾಗಿ ನಾನಾ ಕಾಲೇಜಿನ 1.000 ಕ್ಕೂ ಅಧಿಕ ವಿದ್ಯಾರ್ಥಿಗಳು ಮಾದಕ ವ್ಯಸನ ವಿರೋಧಿ ಅಭಿಯಾನದಲ್ಲಿ ಭಾಗವಹಿಸಿದ್ದರು.
ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ಸುಮಾರು 25 ವಿದ್ಯಾರ್ಥಿಗಳು ಮಾದಕ ವ್ಯಸನದಿಂದಾಗುವ ದುಷ್ಟಪರಿಣಾಮದ ಕುರಿತು ಭಿತ್ತಿಪತ್ರಗಳನ್ನು ಪ್ರದರ್ಶನ ಮಾಡಿದರು. ಟೌನ್ಹಾಲ್ನಲ್ಲಿ ನಗರ ಪೊಲೀಸ್ ಆಯುಕ್ತ ಅನುಪ್ ಅಗರ್ವಾಲ್ ಮತ್ತು ಉಪಪೊಲೀಸ್ ಆಯುಕ್ತ ದಿನೇಶ್ ಕುಮಾರ್ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಕಾಲೇಜಿನ ಯೋಗ ವಿಜ್ಞಾನ ವಿಭಾಗದ ಸಂಯೋಜಕ ಪ್ರೊ. ಕೇಶವ ಮೂರ್ತಿ, ಉಪನ್ಯಾಸಕ ಡಾ. ಅಜಿತೇಶ್, ಡಾ. ರಂಗಪ್ಪ ಇದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ