ಮಂಗಳೂರು: ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ

Upayuktha
0



ಮಂಗಳೂರು:  ಮಂಗಳೂರು ನಗರ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ನಗರದ ಟೌನ್ಹಾಲ್ನಿಂದ ಟಿಎಂಎ ಪೈ ಹಾಲ್ವರೆಗೂ ವಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದರ ಅಂಗವಾಗಿ ನಾನಾ ಕಾಲೇಜಿನ 1.000 ಕ್ಕೂ ಅಧಿಕ ವಿದ್ಯಾರ್ಥಿಗಳು ಮಾದಕ ವ್ಯಸನ ವಿರೋಧಿ ಅಭಿಯಾನದಲ್ಲಿ ಭಾಗವಹಿಸಿದ್ದರು. 




ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ಸುಮಾರು 25 ವಿದ್ಯಾರ್ಥಿಗಳು ಮಾದಕ ವ್ಯಸನದಿಂದಾಗುವ ದುಷ್ಟಪರಿಣಾಮದ ಕುರಿತು ಭಿತ್ತಿಪತ್ರಗಳನ್ನು ಪ್ರದರ್ಶನ ಮಾಡಿದರು. ಟೌನ್ಹಾಲ್ನಲ್ಲಿ ನಗರ ಪೊಲೀಸ್ ಆಯುಕ್ತ ಅನುಪ್ ಅಗರ್ವಾಲ್ ಮತ್ತು ಉಪಪೊಲೀಸ್ ಆಯುಕ್ತ ದಿನೇಶ್ ಕುಮಾರ್ ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಕಾಲೇಜಿನ ಯೋಗ ವಿಜ್ಞಾನ ವಿಭಾಗದ ಸಂಯೋಜಕ ಪ್ರೊ. ಕೇಶವ ಮೂರ್ತಿ, ಉಪನ್ಯಾಸಕ ಡಾ. ಅಜಿತೇಶ್, ಡಾ. ರಂಗಪ್ಪ ಇದ್ದರು.     



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top