ಮಂಗಳೂರು: ಹುಬ್ಬಳ್ಳಿಯ 31 ವರ್ಷಗಳ ಹಳೆಯ ಪ್ರಕರಣವನ್ನು ಮತ್ತೆ ಕೆದಕಿ ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವುದನ್ನು ಪ್ರತಿಭಟಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯಿತು.ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಕೋರರು ಅಮಾಯಕರು ಎಂದು ಹೇಳಿ ಬಿಡುಗಡೆ ಮಾಡುವ ಈ ಸರಕಾರ ಕರಸೇವಕರ ಕೇಸುಗಳನ್ನು ಹುಡುಕಿ ತೆಗೆಯುವ ಮೂಲಕ ಹಿಂದೂ ದ್ವೇಷದ ರಾಜಕಾರಣ ಮಾಡುತ್ತಿದೆ.ಈ ಹಿಂದೆ ಶ್ರೀರಾಮ ಮಂದಿರಕ್ಕಾಗಿ ಹೋರಾಟ ಮಾಡಿದ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಗಳನ್ನೇ ವಜಾಗೊಳಿಸಿದ ಕಾಂಗ್ರೆಸ್ ಬಣ್ಣಜನತೆ ಮರೆತಿಲ್ಲ. ಕಾಂಗ್ರೆಸ್ ನ ಎಲ್ಲಾ ಹಿಂದೂ ವಿರೋಧಿ ನಿರ್ಧಾರಗಳಿಗೆ ಜನರು ಲೋಕಸಭಾ ಚುನಾವಣೆಯಲ್ಲಿ ಉತ್ತರಿಸಲಿದ್ದಾರೆ ಎಂದರು.ಪ್ರತಿಭಟನೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಹಾನಗರ ಪಾಲಿಕೆ ಮೇಯರ್ ಸುಧೀರ್ ಕುಮಾರ್ ಶೆಟ್ಟಿ,ಉಪಮೇಯರ್ ಸುನಿತಾ, ಪಕ್ಷದ ವಿವಿಧ ಸ್ತರದ ಜವಾಬ್ದಾರಿ ಹೊಂದಿರುವ ರಾಜ್ಯಗಳ,ಜಿಲ್ಲಾ,ತಾಲೂಕು ಮಟ್ಟದ ನಾಯಕರುಗಳು,ಪಾಲಿಕೆ ಸದಸ್ಯರು, ಕಾರ್ಯಕರ್ತರು,ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ