ಮಂಗಳೂರು: "ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ 60 ವರ್ಷದ ಷಷ್ಟ್ಯಬ್ಧ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ" ಎಂದು ಸಂಘಟನೆಯ ಕಾರ್ಯದರ್ಶಿ ಸುಧಾಕರ್ ಪೇಜಾವರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾರಾಜ್ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಕದ್ರಿಯ ವೇದಮೂರ್ತಿ ವಿಠಲದಾಸ ತಂತ್ರಿಯವರು ವಹಿಸಲಿದ್ದು, ಡಾ.ಎ.ಜೆ. ಶೆಟ್ಟಿಯವರು ಶುಭ ಸಂದೇಶ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಕಾರ್ಯದರ್ಶಿ ಸುಧಾಕರ್ ಪೇಜಾವರ, ಅಧ್ಯಕ್ಷ ಹೆಚ್.ಕೆ. ಪುರುಷೋತ್ತಮ್, ಗೋಪಾಲ ಕುತ್ತಾರ್, ಗಿರಿಪ್ರಕಾಶ್ ತಂತ್ರಿ, ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ