ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಗೆ ಚಾಲನೆ

Upayuktha
0



ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ  ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ  ಡಿ.ವೇದವ್ಯಾಸ್ ಕಾಮತ್ ಅವರ ಮಾರ್ಗದರ್ಶನದಲ್ಲಿ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಅದ್ದೂರಿ ವೇದಿಕೆಯಲ್ಲಿ ಮಾನ್ಯ ಸ್ಪೀಕರ್  ಯು.ಟಿ ಖಾದರ್, ಸಂಸದ  ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ  ವೇದವ್ಯಾಸ್ ಕಾಮತ್ ಅವರು ದೀಪ ಪ್ರಜ್ವಲನೆಗೊಳಿಸುವ ಮೂಲಕ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು.



 

"ಸ್ಟ್ರೀಟ್ ಫುಡ್ ಫಿಯೆಸ್ಟ" ಗೆ ಆರಂಭದಲ್ಲಿಯೇ ಆಹಾರ ಪ್ರಿಯರಿಂದ ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಸಿಕ್ಕಿದ್ದು ಜನವರಿ 28ರ ವರೆಗೆ ಪ್ರತಿನಿತ್ಯ ಸಂಜೆ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ತುಳುನಾಡ ಹಾಗೂ ರಾಜ್ಯ-ದೇಶದ ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ ನಡೆಯಲಿದೆ ಎಂದು ಆಯೋಜಕರು ತಿಳಿಸಿದರು.




ಉದ್ಘಾಟನಾ ಸಮಾರಂಭದಲ್ಲಿ ಗಿರಿಧರ್ ಶೆಟ್ಟಿ ಸಹಿತ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಪದಾಧಿಕಾರಿಗಳು ಹಾಗೂ ಬಿಜೆಪಿಯ ಕಾರ್ಪೊರೇಟರ್ ಗಳು, ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top