ವಿವಿ ಸಂಧ್ಯಾ ಕಾಲೇಜು: 75ನೇ ಗಣರಾಜ್ಯೋತ್ಸವ

Upayuktha
0




ಮಂಗಳೂರು: ಮೌಲ್ಯಾಧಾರಿತ ವ್ಯವಸ್ಥೆ ಖಚಿತಪಡಿಸಿಕೊಳ್ಳಲು ಸಂವಿಧಾನ ಅಗತ್ಯವಾಗಿದ್ದು, ಸಂವಿಧಾನವಿಲ್ಲದೆ ನ್ಯಾಯಯುತ ಸಮಾಜವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಶಹಬರ್ ಪಾಷ ಅವರು ಅಭಿಪ್ರಾಯಪಟ್ಟರು. 



ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವತಿಯಿಂದ ಮಂಗಳೂರು ವಿವಿ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ಆಯೋಜಿಸಲಾಗಿದ್ದ 75ನೇ ವರ್ಷದ ಗಣರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಮೌಲ್ಯಗಳು ಕೇವಲ ಕಾನೂನಿಗೆ ಮಾತ್ರ ಸೀಮಿತವಾಗದೆ ಅದು ಸಮಾಜದಲ್ಲಿ ಸಮರ್ಪಕವಾಗಿ ಅನುಷ್ಟಾನಗೊಳ್ಳಲು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳುವುದು ಮುಖ್ಯ ಎಂದು ತಿಳಿಸಿದರು. 



ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಲಕ್ಷ್ಮಿದೇವಿ. ಎಲ್, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಹಾಗೂ ಎಲ್ಲಾ ಗಣ್ಯರ ಪರಿಶ್ರಮದಿಂದ ರಚಿಸಲಾದ ಸಂವಿಧಾನವನ್ನು ಎಲ್ಲರೂ ಅಳವಡಿಸಿಕೊಂಡು ಎಲ್ಲಿಯೂ ಮಾನವೀಯ ಮೌಲ್ಯಗಳಿಗೆ ದಕ್ಕೆ ಭಾರದ ರೀತಿಯಲ್ಲಿ ಸಾಮಾಜಿಕ ಸುಧಾರಣೆಯನ್ನು ಕಾಣಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹಾತ್ಮ ಗಾಂಧಿಜಿಯ ಆದರ್ಶಗಳನ್ನೂ ಪಾಲಿಸಬೇಕಾಗಿದೆ ಎಂದರು. 



ತುಳು ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿ ನಿರೂಪಿಸಿದರು. ತುಳು ಸ್ನಾತಕೋತ್ತರ ವಿಭಾಗದ ಮಣಿ ಎಂ. ರೈ ಸ್ವಾಗತಿಸಿದರು. ಸ್ನಾತಕೋತ್ತರ ಎಂ.ಬಿ.ಎ ವಿಭಾಗದ ಉಪನ್ಯಾಸಕಿ ಹರಿಣಾಕ್ಷಿ ಅತಿಥಿಗಳನ್ನು ಪರಿಚಯಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕ ವೆಂಕಟೇಶ್ ನಾಯಕ್ ಅವರು ವಂದಿಸಿದರು. ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ದೇಶಭಕ್ತಿಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂಧಿಗಳು ಭಾಗವಹಿಸಿದ್ದರು. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 


Post a Comment

0 Comments
Post a Comment (0)
To Top