ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Upayuktha
0


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಸೆಂಟ್‍ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಭಟ್, ಸ್ಪರ್ಧಾತ್ಮಕ ಜಗತ್ತಿಗೆ ಅಂಕಗಳ ಜೊತೆಗೆ ಉದ್ಯೋಗ ಕೌಶಲಗಳು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 


ವಿಶೇಷ ಉಪನ್ಯಾಸದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಪ್ರೊ. ಲತಾಪಂಡಿತ್, ವಿದ್ಯಾರ್ಥಿ ಬದುಕಿನಲ್ಲಿ ಕಲಿಕಾ ಪ್ರಕ್ರಿಯೆ ನಿರಂತರವಾಗಿ ಸಾಗಬೇಕೆಂದರು. 


ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಪ್ರೊ. ರಾಮಕೃಷ್ಣಬಿ. ಎಂ. ಸೇರಿದಂತೆ ನಾನಾ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top