ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ: ಉಡುಪಿ ಡಿಸಿ

Upayuktha
0


ಉಡುಪಿ
: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. 




 ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುತ್ತಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ ಎಂದರು.  




ಸಮಾರಂಭದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರ ಶಾಲಾ ವಿದ್ಯಾಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.  ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಿ, ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಕುಟುಂಬದವರಿಗೆ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.   




ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.




ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷ ಪ್ರಿಯಂವದ, ಎಎಸ್‌ಪಿ ಸಿದ್ಧಲಿಂಗಪ್ಪ, ಪೌರಾಯುಕ್ತ ರಾಯಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ,  ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top