ಗೋವಿಂದದಾಸ ಕಾಲೇಜಿನಲ್ಲಿ ಸಂಶೋಧನಾ ಬರಹ ಕಾರ್ಯಾಗಾರ
ಸುರತ್ಕಲ್ : ಸ್ನಾತಕೋತ್ತರ ಪದವಿಯಲ್ಲಿ ಸಂಶೋಧನೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಧ್ಯಯನ ಹಾಗೂ ಸಂಶೋಧನಾತ್ಮಕ ಬರಹಗಳ ಮೂಲಕ ಸಮಾಜಮುಖಿ ಕೊಡುಗೆಗಳನ್ನು ಕೊಡಬಹುದಾಗಿದೆ ಎಂದು ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ. ಅಜಯ ನುಡಿದರು.
ಅವರು ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಸ್ನಾತಕೋತ್ತರ ವಾಣಿಜ್ಯ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ನಡೆದ ಸಂಶೋಧನಾ ಬರಹ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಯೆನಪೋಯ ಸಂಶೋಧನ ಕೇಂದ್ರ, ಡೀಮ್ಡ್ ಟುಬಿ ಯುನಿವರ್ಸಿಟಿಯ ಪ್ರಾಧ್ಯಾಪಕ ಡಾ. ನಿಯಾಝ್ ಪಣಕಜೆಯವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಎಸ್.ಪಿ.ಎಸ್.ಎಸ್. (ಸಾಮಾಜಿಕ ವಿಜ್ಞಾನಕ್ಕಾಗಿ ಸಂಖ್ಯಾಶಾಸ್ತ್ರೀಯ ಪ್ಯಾಕೇಜ್) ಕುರಿತು ಪ್ರಾಯೋಗಿಕ ತರಬೇತಿಯನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ. ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಸಂಶೋಧನಾ ಪ್ರವೃತ್ತಿಯನ್ನು ಬೆಳೆಸಿಕೊಳ್ಳಲು ಸಲಹೆ ನೀಡಿದರು.
ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ. ಗಣೇಶ ಆಚಾರ್ಯ ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಪರ್ಣ ಸ್ವಾಗತಿಸಿ ಸಪ್ನಾಝ್ ಅತಿಥಿಗಳನ್ನು ಪರಿಚಯಿಸಿದರು. ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿಯರಾದ ಹರ್ಷರಾಣಿ, ಭಾರತಿ, ದೀಕ್ಷಾ, ಶಿಲ್ಪರಾಣಿ, ಅಪೇಕ್ಷಾ ಹಾಗೂ ಗ್ರಂಥಪಾಲಕಿ ಡಾ.ಸುಜಾತ ಬಿ. ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ