ಹಾಸನ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಪ್ರತಿವರ್ಷದಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನೀಡಲಾಗುವ ಶ್ರೀಮತಿ ಅನಿತಾ ಕೌಲ್ ರಾಜ್ಯ ಪ್ರಶಸ್ತಿಗೆ ಹಾಸನ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಉತ್ತಮ ಶಿಕ್ಷಕರನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಪ್ರೌಢಶಾಲಾ ವಿಭಾಗದಿಂದ ಚಿದಾನಂದ ಕೆ. ಎನ್. ಸಹಶಿಕ್ಷಕರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ( ಪ್ರಧಾನ ) ಪ್ರೌಢಶಾಲಾ ವಿಭಾಗ , ಗಂಧದ ಕೋಠಿ ಆರ್.ಸಿ. ರಸ್ತೆ, ಹಾಸನ.
ಆಯ್ಕೆಯಾದ ಶಿಕ್ಷಕರಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಅಭಿನಂದಸಿರುತ್ತದೆ. ದಿನಾಂಕ : 07-01-2024ರ ಭಾನುವಾರದಂದು ಶ್ರೀಮತಿ ಅನಿತಾ ಕೌಲ್ ರಾಜ್ಯ ಪ್ರಶಸ್ತಿ ಪುರಸ್ಕಾರ ಸಮಾರಂಭ ನ್ಯಾಷನಲ್ ಕಾಲೇಜ್ ಬೆಂಗಳೂರು ಶ್ರೀ ಎಚ್ ನರಸಿಂಹಯ್ಯ ಆಡಿಟೋರಿಯಂ ಬಸವನ ಗುಡಿ ಇಲ್ಲಿ ನಡೆಯುವ ಸಮಾರಂಭದಲ್ಲಿ ಎಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಪ್ರಶಸ್ತಿ ನೀಡಿ ಪುರಸ್ಕರಿಸುತ್ತದೆ ಎಂದು ಹಾಸನ ಜಿಲ್ಲಾ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಧ್ಯಕ್ಷರು ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ