ಉಜಿರೆ: ಯುವತನ ಎನ್ನುವುದು ನಮ್ಮ ವಯಸ್ಸಿನಿಂದ ನಿರ್ಧರಿತವಾಗುವುದಲ್ಲ. ಅದು ನಮ್ಮ ಮನಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ. ನರೇಂದ್ರನಾಗಿದ್ದಂತಹ ವ್ಯಕ್ತಿಯು ತಮ್ಮ ಮನೋಬಲ, ಏಕಾಗ್ರತೆ, ಇಚ್ಛಾಶಕ್ತಿ ಮತ್ತು ನಿರ್ದಿಷ್ಟ ಗುರಿಯ ಮುಖಾಂತರ ವಿವೇಕಾನಂದರಾದರು. ಸಮಯಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ಉನ್ನತಿಯನ್ನು ಹೊಂದಲು ಸಾಧ್ಯವೆಂದು ಭಾರತೀಯ ವಾಯುಸೇನೆಯ ಗ್ರೌಂಡ್ ಟೈನಿಂಗ್ ತರಬೇತುದಾರ ಪ್ರಮೋದ್ ಹೇಳಿದರು.
ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆಯಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ 161 ನೇ ಜನ್ಮ ಜಯಂತಿ “ಯುವದಿನೋತ್ಸವ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಮಾತನಾಡಿ, ವಿವೇಕಾನಂದರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್. ಕೆ, ಹರೀಶ್ ಕುಮಾರ್, ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ವೀರಗೀತೆಯನ್ನು ಹಾಡುವ ಮೂಲಕ ಚಾಲನೆ ನೀಡಿ ಸ್ವಾಮಿ ವಿವೇಕಾನಂದರ ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ ವೀಡಿಯೋ ತುಣುಕನ್ನು ಪ್ರದರ್ಶಿಸಲಾಯಿತು.
ವಿವೇಕಾನಂದರ ವ್ಯಕ್ತಿತ್ವದ ಕುರಿತು ಪ್ರಶಿಕ್ಷಣಾರ್ಥಿ ಚಂದ್ರಶೇಖರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಪ್ರಶಿಕ್ಷಣಾರ್ಥಿ ಕೀರ್ತನ್ ಅತಿಥಿ ಪರಿಚಯ ಮಾಡಿದರು. ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿ ಪ್ರೀತಿ ಸ್ವಾಗತಿಸಿ, ವಿನಯ ಧನ್ಯವಾದವಿತ್ತರು. ಪೂಜಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ