ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ಪಿ.ಬಿ.ಹರೀಶ್ ರೈ ಆಯ್ಕೆ

Upayuktha
0


ಮಂಗಳೂರು‌: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ)ದ 2022-23 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಕೆಯುಡಬ್ಲ್ಯುಜೆ ವಿಶೇಷ ಪ್ರಶಸ್ತಿಗೆ ‌ವಿಜಯವಾಣಿ ಮಂಗಳೂರು ಮುಖ್ಯ ವರದಿಗಾರ ಪಿ.ಬಿ. ಹರೀಶ್ ರೈ ಆಯ್ಕೆಯಾಗಿದ್ದಾರೆ.


ಪತ್ರಿಕೋದ್ಯಮದಲ್ಲಿ 3 ದಶಕದ ಅನುಭವ ಹೊಂದಿರುವ ಪಿ.ಬಿ.ಹರೀಶ್ ರೈ ಅವರು ಕುಕ್ಕೆ ಸುಬ್ರಹ್ಮಣ್ಯದ ವರಾಗಿದ್ದು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಮಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷ ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿದ್ದಾರೆ. 


ದಾವಣಗೆರೆಯಲ್ಲಿ  ಫೆ. 3 ಮತ್ತು 4 ರಂದು ನಡೆಯುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕೆಯುಡಬ್ಲ್ಯುಜೆ ವಾರ್ಷಿಕ  ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   .

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top