ಗೋವಿಂದ ದಾಸ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Upayuktha
0



ಸುರತ್ಕಲ್ : ಗೋವಿಂದ ದಾಸ ಕಾಲೇಜಿನಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ. ಕೃಷ್ಣಮೂರ್ತಿ ಧ್ವಜಾರೋಹಣಗೈದರು. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. 



ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ.ಹರೀಶ ಆಚಾರ್ಯ ಪಿ., ಪ್ರೊ. ನೀಲಪ್ಪ ವಿ, ಆ್ಯಶೆ ಸಂಯೋಜಕ ಪ್ರೊ. ವಾಮನ ಕಾಮತ್, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ., 2004ರಲ್ಲಿ ರಾಷ್ಟ್ರೀಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜಕಿಯಾಗಿ ಭಾಗವಹಿಸಿದ್ದ ಹಿಂದೂ ವಿದ್ಯಾದಾಯಿನೀ ಸಂಘದ ಆಡಳಿತಾಧಿಕಾರಿ ಮೃದುಲಾ, 2017ರಲ್ಲಿ ರಾಷ್ಟ್ರೀಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಎನ್.ಸಿ.ಸಿ.ಯನ್ನು ಪ್ರತಿನಿಧಿಸಿ ಭಾಗವಹಿದ್ದ ಸುಮಿತ್ರ ಭಂಡಾರಿ, ಸ್ಟಾಫ್ ಅಸೋಸಿಯೇಶನ್‍ನ ಕಾರ್ಯದರ್ಶಿ ಗೀತಾ ಕೆ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಅಕ್ಷತಾ ವಿ., ಡಾ. ಭಾಗ್ಯಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು. 



ಈ ಬಾರಿಯ ರಾಷ್ಟ್ರೀಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಹಿತಾ ಉಮೇಶ್ ಹಾಗೂ ಎನ್.ಸಿ.ಸಿ ಕೆಡೆಟ್ JUO ವಿವೇಕ್ ಎಸ್. ಶೆಟ್ಟಿ ದೆಹಲಿಯಲ್ಲಿ ಮಾನ್ಯ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ಪ್ರದರ್ಶಿಸಿರುವ ನೃತ್ಯಗಳ ಭಾಗಗಳನ್ನು ಪ್ರದರ್ಶಿಸಲಾಯಿತು.




Post a Comment

0 Comments
Post a Comment (0)
To Top