ಮುಂಡಾಜೆ: ದೇಶದಾದ್ಯಂತ ನಡೆಯುತ್ತಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ 2024ರ ಜ.11 ರಿಂದ 17 ವರೆಗೆ ಮುಂಡಾಜೆ ಪದವಿ ಪೂರ್ವ ಕಾಲೇಜು, ಮುಂಡಾಜೆ ಇಲ್ಲಿನ ರೋವರ್ಸ್ & ರೇಂಜರ್ಸ್ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ASI ಹರಿಪ್ರಸಾದ್, ರಸ್ತೆ ಸುರಕ್ಷತೆಯ ಪಾಲನೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಓ ಎ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯ ಸಂಚಾಲಕರಾದ ನಾರಾಯಣ ಗೌಡ ಕೊಳಂಬೆ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಸುನಿಲ್, ರೇಂಜರ್ ಲೀಡರ್ ವಸಂತಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಉಪಸ್ಥಿತರಿದ್ದರು. ರೇಂಜರ್ ವಿದ್ಯಾರ್ಥಿನಿಯರಾದ ಮಧುಶ್ರೀ ಸ್ವಾಗತಿಸಿ, ಸಂಪದಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ರಾವ್ಯ ಧನ್ಯವಾದಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ