ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅಧ್ಯಾಪಕರ ಕೌಶಲಾಭಿವೃದ್ಧಿ ಅತ್ಯಂತ ಪೂರಕ ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು.
ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಕೇಪ್ ಕಾಮೊರಿನ್ ಟ್ರಸ್ಟ್ ಸಹಯೋಗದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನಲ್ಲಿ ಜ. 25ರಂದು "ವಿವಿಧ ತಂತ್ರಗಳೊಂದಿಗೆ ಬೋಧನೆ, ಕಲಿಕೆ. ಶಿಕ್ಷಣ ಮತ್ತು ಸಂಶೋಧನೆ" ಕುರಿತು ಒಂದು ವಾರ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಾವೀನ್ಯತೆಯ ಯುಗದಲ್ಲಿ ವಿದ್ಯಾರ್ಥಿಗಳು ಸೃಜನಶೀಲರಾಗಿ ಹೊಸತನಗಳನ್ನು ಮೈಗೂಡಿಸಿಕೊಳ್ಳುವಂತೆ ಮಾಡುವಲ್ಲಿ ಅಧ್ಯಾಪಕರ ಪಾತ್ರ ಮಹತ್ವದ್ದು. ಇದನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧ್ಯಾಪಕರು ಕೂಡ ಅಭಿವೃದ್ಧಿ ಹೊಂದಬೇಕು ಎಂದರು.
ಶಿಕ್ಷಕರು ತಮ್ಮ ಕಲಿಕೆಯನ್ನು ಅಳವಡಿಸಿಕೊಳ್ಳುವುದಷ್ಟೇ ಅಲ್ಲ, ಅದನ್ನು ಪಸರಿಸಬೇಕು. ಅಧ್ಯಾಪಕರು ವಿದ್ಯಾರ್ಥಿಗಳ ಕ್ರಿಯಾತ್ಮಕ ಅಗತ್ಯಗಳನ್ನು ಪೂರೈಸಲು ಹೊಸ ಶೈಕ್ಷಣಿಕ ಮಾದರಿಗಳಿಗೆ ಹೊಂದಿಕೊಳ್ಳುವುದು ಅಗತ್ಯ ಎಂದು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಮೊದಲ ದಿನದ ಕಾರ್ಯಾಗಾರದಲ್ಲಿ ಡಾ. ಲುಯಿಸ್ ಮಿಗುಯೆಲ್ ಒಲಿವೆರಾ ಡಿ ಬರೋಸ್ ಕಾರ್ಡೋಸೋ, ಡಾ. ರ‍್ಯೋ ಟಕಾಹಶಿ ಮತ್ತು ತನುಶ್ರೀ ಸರ್ಕಾರ್ ಸಂಪನ್ಮೂಲ ವ್ಯಕ್ತಿಗಳಾದ್ದರು. ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ಮತ್ತು ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


