ಹಿರಿಯ ಸಾಹಿತಿ ಅಮೃತ ಸೋಮೇಶ್ವರ ನಿಧನಕ್ಕೆ ಸಂತಾಪ

Upayuktha
0



ಮಂಗಳೂರು/ಉಡುಪಿ: ಖ್ಯಾತ ಸಾಹಿತಿ,ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರ ಹಾಗೂ ವಿದ್ವಾಂಸರಾದ ಅಮೃತ ಸೋಮೇಶ್ವರ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.



ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಯುಗಪುರುಷ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಭುವನಾಭಿರಾಮ ಉಡುಪ, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಕಾ.ವೀ. ಕೃಷ್ಣದಾಸ್, ದ. ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ದ.ಕ ಚುಸಾಪ ಜಿಲ್ಲಾ ಗೌರವಾಧ್ಯಕ್ಷ ಸಾಹಿತಿ ಇರಾ ನೇಮು ಪೂಜಾರಿ,




ಚುಸಾಪ ಮಂಗಳೂರು ತಾಲೂಕು ಅಧ್ಯಕ್ಷ ಗೋಪಾಲ ಕೃಷ್ಣ ಶಾಸ್ತ್ರೀ, ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊ|ಪಿ. ಕೃಷ್ಣಮೂರ್ತಿ, ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕ‌ರ್ ರೈ ಕುಕ್ಕುವಳ್ಳಿ, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಸಾಹಿತಿ ಕೆನರಾ ಕಾಲೇಜಿನ ಕನ್ನಡ ಉಪನ್ಯಾಸಕ ರಘು ಇಡ್ಕಿದು,  ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಕದ್ರಿ ನವನೀತ್ ಶೆಟ್ಟಿ, ಕಲ್ಲಚ್ಚು ಪ್ರಕಾಶನದ ಅಧ್ಯಕ್ಷ ಕಥೆಗಾರ ಮಹೇಶ್ ಆರ್ ನಾಯಕ್, ಸಂಘಟಕ ಉದ್ಯಮಿ ಗುರುಪ್ರಸಾದ್ ಕಡಂಬಾ‌ರ್, ಕವಿ ಪತ್ರಕರ್ತ ರೇಮಂಡ್ ಡಿಕುನಾ, ಆಗ್ನೇಸ್ ಕಾಲೇಜು ಉಪನ್ಯಾಸಕ ಸಂಶೋಧಕ ಡಾ ಅರುಣ್ ಉಳ್ಳಾಲ್, ಚುಟುಕು ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾ ಗೌರವಾಧ್ಯಕ್ಷೆ ತಾರಾ ಆಚಾರ್ಯ ಮೊದಲಾದ ಗಣ್ಯರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top