ವಿಕಲತೆ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ
ಶಿವಮೊಗ್ಗ: ಮನಸ್ಫೂರ್ತಿ ಕಲಿಕಾ ಕೇಂದ್ರ, ಶಿವಮೊಗ್ಗ ಹಾಗೂ ಈಶಾನ್ಯ ಇಂಡಿಯಾ ಫೌಂಡೇಶನ್, ಬೆಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲೆಯ ವಿ.ಆರ್.ಡಬ್ಲ್ಯೂ., ಯು.ಆರ್.ಡಬ್ಲ್ಯೂ. ಹಾಗೂ ಎಂ.ಆರ್.ಡಬ್ಲ್ಯೂ. ಇವರಿಗೆ ಮನಸ್ಫೂರ್ತಿ ಕಲಿಕಾ ಕೇಂದ್ರ ದಲ್ಲಿ "ಬೌದ್ಧಿಕ ಮತ್ತು ಬೆಳವಣಿಗೆಯ ಹಂತಗಳು, ವಿಕಲತೆ" ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಡಾ.ಎ.ರಜನಿ ಪೈ ಅವರು ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶ್ರೀ ಚಂದ್ರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಪ್ರಭಾರಿ ಅಂಗವಿಕಲ ಯೋಜನಾಧಿಕಾರಿಗಳು ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಅಂಗವಿಕಲತೆ ಒಂದು ಶಾಪವಲ್ಲ. ಸಮಾಜದ ಮುಖ್ಯವಾಹಿನಿಗೆ ಅವರನ್ನು ತರಲು ಇಂತಹ ಕಾರ್ಯಾಗಾರ ಗಳು ಅತ್ಯಂತ ಸಹಕಾರಿ ಎಂದು ತಿಳಿಸಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿಗಳಾದ ಶ್ರೀಮತಿ ಲಕ್ಷ್ಮೀ ಪ್ರಸಾದ್, ಸಲಹೆಗಾರರು ಮತ್ತು ತರಬೇತುದಾರರು, ಈಶಾನ್ಯ ಇಂಡಿಯಾ ಫೌಂಡೇಶನ್, ಬೆಂಗಳೂರು ಇವರು ತಮ್ಮ ಸಂಸ್ಥೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶಗಳನ್ನು ವಿವರಿಸಿದರು.
ಡಾ.ಪ್ರೀತಿ ಶಾನಬಾಗ್, ಶೈಕ್ಷಣಿಕ ನಿರ್ದೇಶಕರು, ಮನಸ್ಫೂರ್ತಿ ಕಲಿಕಾ ಕೇಂದ್ರ, ಮಾನಸ ಟ್ರಸ್ಟ್, ಇವರು ಮನಸ್ಫೂರ್ತಿ ಕಲಿಕಾ ಕೇಂದ್ರದ ಸ್ಥಾಪನೆಯ ಉದ್ದೇಶ ಹಾಗೂ ಫಲಾನುಭವಿಗಳ ಬಗ್ಗೆ ವಿವರಿಸಿದರು. ಶ್ರೀಮತಿ ರೂಪ ಲಕ್ಷ್ಮೀ, ಕಾರ್ಯಕ್ರಮ ಯೋಜನಾಧಿಕಾರಿಗಳು, ಈಶಾನ್ಯ ಇಂಡಿಯಾ ಫೌಂಡೇಶನ್, ಬೆಂಗಳೂರು ಇವರು ತಮ್ಮ ಸಂಸ್ಥೆಯ ಸ್ಥಾಪನೆಯ ಉದ್ದೇಶ ಹಾಗೂ ಬೆಳೆದು ಬಂದ ದಾರಿಯನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಶ್ರೀಮತಿ ರಂಗನಾಯಕಿ, ಸಂಯೋಜಕರು, ಮನಸ್ಫೂರ್ತಿ ಕಲಿಕಾ ಕೇಂದ್ರ ಇವರು ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕಿಯಾದ ಶ್ರೀಮತಿ ಅನುಷಾ ಅರುಣ್ ನಿರೂಪಣೆ ಹಾಗೂ ಶ್ರೀ ರಾಜೇಶ್ ಬಾಬು ವಂದನಾರ್ಪಣೆಯನ್ನು ಮಾಡಿದರು. ಕಾರ್ಯಕ್ರಮವು ಉತ್ತಮವಾಗಿ ಮೂಡಿಬಂದಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


