ಸಮಾಜಕ್ಕೆ ಪೂರಕವಾಗಬೇಕಿದ್ದ ಸಂಘಟನೆಗಳು ಮಾರಕವಾಗಿವೆ: ಸೂರ್ಯನಾರಾಯಣ ಭಟ್ ಕಶೇಕೋಡಿ

Upayuktha
0


ಬಂಟ್ವಾಳ: ಸಮಾಜಕ್ಕೆ ಪೂರಕ ಆಗಬೇಕಾದ ಸಂಘಟನೆಗಳು ಇಂದು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದು ಸೂರ್ಯನಾರಾಯಣ ಭಟ್ ಕಶೇಕೋಡಿ ಹೇಳಿದರು.


ಅವರು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ವೀರಮಾರುತಿ ವ್ಯಾಯಮ ಶಾಲೆ ಟ್ರಸ್ಟ್ (ರಿ.) ಮಾರುತಿನಗರ ನರಿಕೊಂಬು ಪಾಣೆಮಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಿದ ವ್ಯಾಯಮಶಾಲೆ ಹಾಗೂ ಸಭಾಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು.


ಧಾರ್ಮಿಕ ಕೇಂದ್ರಗಳು ಮಕ್ಕಳಲ್ಲಿ ಧಾರ್ಮಿಕ ಚಿಂತನೆಗಳನ್ನು ಮೂಡಿಸಿ ರಾಮ ರಾಜ್ಯದ ಕನಸನ್ನು ಹೊತ್ತ ಭಾರತದ ಸತ್ಪ್ರಜೆಗಳಾಗುವಂತೆ ಕರೆ ನೀಡಿ, ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಗೊಳ್ಳಲಿರುವ ಸಂದರ್ಭದಲ್ಲಿ ಪ್ರತಿ ಮನೆಯಲ್ಲಿ ದೀಪ ಪ್ರಜ್ವಲಿಸಿ ಸಂಭ್ರಮಿಸಿ ಎಂದರು.


ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ವೀರಮಾರುತಿ ವ್ಯಯಾಮ ಶಾಲಾ ಟ್ರಸ್ಟ್ ಅಧ್ಯಕ್ಷ ಚಂದ್ರಹಾಸ ಕೋಡಿಮಜಲು, ಮಹಿಳಾ ಮಂಡಳಿ ಅಧ್ಯಕ್ಷ ಅನಿತಾ ಜೆ ಉಪಸ್ಥಿತರಿದ್ದರು.


ಕಟ್ಟಡ ನಿರ್ಮಾಣ ಸಮಿತಿಯ ಕೋಶಾಧಿಕಾರಿ ಯಾದವ ಕೆ ಸ್ವಾಗತಿಸಿ, ಮಹೇಶ್ ಕಡೇಶಿವಾಲಯ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top