ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರ ಪರ್ಯಾಯೋತ್ಸವ

Upayuktha
0



ಉಡುಪಿ :  ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಉಡುಪಿ ಇದರ ವತಿಯಿಂದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಇದರ ಸಹಯೋಗದೊಂದಿಗೆ ಶ್ರೀ ಪುತ್ತಿಗೆ ಮಠಾಧೀಶರ ಪರ್ಯಾಯೋತ್ಸವ ಕಾರ್ಯಕ್ರಮದ ಅಂಗವಾಗಿ ನೃತ್ಯ ವೈವಿಧ್ಯ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು. 



ಕಾರ್ಯಕ್ರಮದಲ್ಲಿ ಮಾತನಾಡಿದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ|| ತಲ್ಲೂರು ಶಿವರಾಮ ಶೆಟ್ಟಿ ಈ ರೀತಿಯ ಕಾರ್ಯಕ್ರಮಗಳು ಜನರಿಗೆ ಉತ್ತಮವಾದ ಸಂದೇಶದೊಂದಿಗೆ ಮನರಂಜನೆ ನೀಡುತ್ತದೆ, ಈ ಪರ್ಯಾಯದ ಅಂಗವಾಗಿ ನಡೆದ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು, 



ಮುಖ್ಯ ಅತಿಥಿ ಉದ್ಯಮಿ ಸೂರ್ಯ ಪ್ರಕಾಶ್ ಶುಭಹಾರೈಸಿದರು. ನಗರಸಭಾ ಸದಸ್ಯೆ ಮಾನಸಿ ಸಿ ಪೈ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ನವೀನ್ ಅಮೀನ್, ಅಭಿವೃದ್ಧಿ ಮತ್ತು ಬೆಳವಣಿ ವಿಭಾಗದ ನಿರ್ದೇಶಕ ಚಿತ್ರ ಕುಮಾರ್, ಸುರೇಖಾ ಶೆಟ್ಟಿ, ಸೀನಿಯರ್ ಚೇಂಬರ್ ಟೆಂಪಲ್ ಸಿಟಿ ಅಧ್ಯಕ್ಷ ಆಲ್ವಿನ್ ಮ್ಯಾನೇಜಸ್ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಸಂಘಟಕರಾದ ಗಿರಿಜಾ ಹೆಲ್ತ್ ಕೇರ್ ಅಂಡ್ ಸರ್ಜಿಕಲ್ ಇದರ ಆಡಳಿತ ಪಾಲುಗಾರರಾದ ರವೀಂದ್ರ ಶೆಟ್ಟಿ ಕಡೆಕಾರು ಪ್ರಸ್ತಾವನೆ ಗೈದು ಸ್ವಾಗತಿಸಿದರು ಕಾಯ೯ಕ್ರಮದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವಣ೯, ಕಾಪು ಶಾಸಕರಾದ ಗುಮೆ೯ ಸುರೇಶ್ ಶೆಟ್ಟಿ ಭಾಗವಹಿಸಿದ್ದರು..ಈ ಸಂದಭ೯ದಲ್ಲಿ ಹಲವಾರು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು. ರಾಘವೇಂದ್ರ ಕವಾ೯ಲು ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top