ಶ್ರೀನಿವಾಸ ವಿಶ್ವವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ - 2024

Upayuktha
0



ಮಂಗಳೂರು: ಕ್ರೀಡೆ ವಿದ್ಯಾರ್ಥಿಗಳಲ್ಲಿ ಸದೃಢತೆ ಜತೆಗೆ ಜ್ಞಾನಮಟ್ಟ ಹೆಚ್ಚಿಸುವಲ್ಲಿ ಮತ್ತು ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಂಗಳೂರಿನ ಕುಟುಂಬ ನ್ಯಾಯಾಲಯದ ಪ್ರಿನ್ಸಿಪಾಲ್ ನ್ಯಾಯಾಧೀಶರಾದ ಅಭಯ್ ಧನ್ಪಾಲ್ ಚೌಗಳ ಹೇಳಿದರು.




ಅವರು ಜ.24, 2024ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಕಾಲೇಜುಗಳ ಆಶ್ರಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ತನ್ನ ಬಾಲ್ಯ ಜೀವನದ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಪ್ರೇರೇಪಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಹಾಗೂ ಎ. ಶಾಮರಾವ್ ಫೌಂಡೇಶನ್ ಉಪಾಧ್ಯಕ್ಷರಾದ ಡಾ.ಎ. ಶ್ರೀನಿವಾಸ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ  ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ. ಇದರಿಂದ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು.




ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯೆ ಪ್ರೊ.ಇಆರ್. ಶ್ರೀಮತಿ ಎ. ಮಿತ್ರಾ ಎಸ್. ರಾವ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ದೈಹಿಕ ಸದೃಢತೆಯ ಮಹತ್ವ ಮತ್ತು ಕ್ರೀಡೆಯ ಪ್ರಾಮುಖ್ಯತೆಯನ್ನು ತಿಳಿಸಿದರು.



ವೇದಿಕೆಯಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ರಿಜಿಸ್ಟರ್ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ರಿಜಿಸ್ಟ್ರಾರ್ ಡಾ. ಶ್ರೀನಿವಾಸ ಮಯ್ಯ ಡಿ, ಅಭಿವೃದ್ಧಿ ರಿಜಿಸ್ಟರ್ ಡಾ.ಅಜಯ್ ಕುಮಾರ್,  ಕಾರ್ಯಕ್ರಮ ಸಂಚಾಲಕರಾದ ಡಾ.ಪವಿತ್ರ ಕುಮಾರಿ, ದೈಹಿಕ ನಿರ್ದೇಶಕಿ ಸುಪ್ರಿಯಾ ಅಡಿಗ ಸೇರಿದಂತೆ ಸಂಸ್ಥೆಯ ಡೀನ್ ಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ಕಾರ್ಯಕ್ರಮಕ್ಕೆ ದೀಪಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ದಿಶಾ ಶೆಟ್ಟಿ ಕ್ರೀಡಾ ಪ್ರಮಾಣವಚನ ಬೋಧಿಸಿದರು. ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ ಡಿ. ಸ್ವಾಗತಿಸಿ, ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ವಂದಿಸಿದರು. ಪ್ರೊ. ರೋಹನ್ ಫೆರ್ನಾಂಡಿಸ್ , ಪ್ರೊ.ಸ್ಟೀವನ್ ರಾಬರ್ಟ್ ಟೆಲ್ಲಿಸ್ ಕಾರ್ಯಕ್ರಮ ನಿರೂಪಿಸಿದರು.




Post a Comment

0 Comments
Post a Comment (0)
To Top