ವಿದ್ಯಾರ್ಥಿಗಳು ಪರೀಕ್ಷಾ ಭಯವನ್ನು ಸಮರ್ಥವಾಗಿ ಎದುರಿಸಲು ಕಲಿಯಬೇಕು: ಮಂಜುನಾಥ ಸ್ವಾಮಿ

Upayuktha
0

ಆನಂದಪುರ (ಶಿವಮೊಗ್ಗ): ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಕರ್ನಾಟಕ ಪಬ್ಲಿಕ್ ಸ್ಕೂಲ್ ಆನಂದಪುರ ವತಿಯಿಂದ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ "ಪರೀಕ್ಷೆ ಭಯವನ್ನು ಎದುರಿಸುವುದು ಹೇಗೆ" ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಪ್ತಸಮಾಲೋಚಕರು ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ ಸ್ವಾಮಿಯವರು ಮಾತನಾಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಮತ್ತು ಒತ್ತಡವನ್ನು ಹೇಗೆ ಕಡಿಮೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸಿದರು. ಪ್ರಸ್ತುತ ದಿನಮಾನಗಳಲ್ಲಿ ಮೊಬೈಲ್ ಚಟವು ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿದ್ದು ಅದನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.


ಮುಖ್ಯ ಅತಿಥಿಗಳಾಗಿ ಗೌತಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಅರೋಗ್ಯ ಅಧಿಕಾರಿ ಡಾ.ಉಲ್ಲಾಸ್ ಮತ್ತು ಕಾಲೇಜಿನ ಹಿರಿಯ ಉಪನ್ಯಾಸಕರು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಗೌತಮಪುರ ಅರೋಗ್ಯ ಸೇವಕರು, ಆಶಾ ಕಾರ್ಯಕರ್ತೆಯರು, ಕಾಲೇಜಿನ ಉಪನ್ಯಾಸಕರು ಹಾಗೂ 200ಕ್ಕೂ ಹೆಚ್ಚು ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top