ತೆಂಕನಿಡಿಯೂರು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

Upayuktha
0



ಉಡುಪಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ಆಂತರಿಕ ಗುಣಮಟ್ಟ ಭರವಸಾ ಕೋಶ, ಇತಿಹಾಸ ಸ್ನಾತಕೋತ್ತರ ವಿಭಾಗ, ಇಂಗ್ಲೀಷ್ ಸ್ನಾತಕೋತ್ತರ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆಯ ಅಂಗವಾಗಿ ವಿವೇಕಾನಂದರು ಮತ್ತು ರಾಷ್ಟ್ರೀಯತೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.




ಕಾಲೇಜಿನ ಇಂಗ್ಲೀಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ವಿಭಾಗ ಸಂಯೋಜಕರಾದ ಡಾ. ಪ್ರಸಾದ್ ರಾವ್ ಎಂ. ರವರು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ವಿವೇಕಾನಂದರು ಮತ್ತು ರಾಷ್ಟ್ರೀಯತೆ ಕುರಿತಂತೆ ವಿದ್ಯಾರ್ಥಿಗಳಿಗೆ ವಿವೇಕಾನಂದರು ಈ ದೇಶದ ಆಧ್ಯಾತ್ಮಿಕ ನಾಯಕರು ಮಾತ್ರವಲ್ಲದೆ, ಎಲ್ಲಾ ಧರ್ಮಗಳ ಸಮನ್ವಯ ಚಿಂತಕರು, ಭಾರತ ದೇಶದ ಹಿಂದೂ ಧರ್ಮ, ಸಂಸ್ಕøತಿಯ ಶ್ರೇಷ್ಠತೆಯನ್ನು ಸಾರಿದ ವಿಶ್ವಮಾನ್ಯರು ಹಾಗೂ ವಿವೇಕಾನಂದರ ಚಿಂತನೆಗಳ ಪ್ರಸ್ತುತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.




ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ವಿವೇಕಾನಂದರ ಜನ್ಮದಿನಾಚರಣೆಯ ಪ್ರಾಮುಖ್ಯತೆಯನ್ನು ತಿಳಿಸಿದರು.  ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಘವ ನಾಯ್ಕ, ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ  ತಿಮ್ಮಣ್ಣ ಜಿ. ಭಟ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಅಧ್ಯಕ್ಷರಾದ ಕು. ನಿಶಾ ಉಪಸ್ಥಿತರಿದ್ದರು.




ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಉಪನ್ಯಾಸಕರು ಭಾಗವಹಿಸಿದ್ದರು.  ಕಾರ್ಯಕ್ರಮವನ್ನು ದ್ವಿತೀಯ ಎಂ.ಎ. ಇತಿಹಾಸದ ವಿದ್ಯಾರ್ಥಿ ದಿನೇಶ ನಿರೂಪಿಸಿದರು.  ಪ್ರಥಮ ಎಂ.ಎ. ಇಂಗ್ಲೀಷ್ ವಿಭಾಗದ ವಿದ್ಯಾರ್ಥಿನಿ ಮನೀಷಾ ಎಲ್ಲರನ್ನು ಸ್ವಾಗತಿಸಿದರು.  ದ್ವಿತೀಯ ಇತಿಹಾಸ ವಿಭಾಗದ ವಿದ್ಯಾರ್ಥಿ ಯಶವಂತ ವಂದಿಸಿದರು.  ಇಂಗ್ಲೀಷ್ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. 




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top