ಬೆಂಗಳೂರು: ಕರ್ನಾಟಕ ಸರ್ಕಾರದ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇವರು ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ರವರ ಸಂಪಾದಕತ್ವದಲ್ಲಿ ಕರ್ನಾಟಕದ ಸಂಕ್ಷಿಪ್ತ ಮರಾಠ ಸಾಂಸ್ಕೃತಿಕ ಪರಂಪರೆಯ ಕುರಿತು ಆಕರ ಗ್ರಂಥವನ್ನು ಹೊರತರಲಾಗುತ್ತಿದೆ.
ಪ್ರಸ್ತುತ ಗ್ರಂಥದಲ್ಲಿ ಕರ್ನಾಟಕಕ್ಕೆ ಮರಾಠರ ಕೊಡುಗೆ, ಚಾರಿತ್ರಿಕ ಅಂಶಗಳು ಅಂತೆಯೇ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಭಾಗಗಳಲ್ಲಿ ಮರಾಠರ ಆಳ್ವಿಕೆ-ಧಾರ್ಮಿಕ- ಸಾಂಸ್ಕೃತಿಕ ಕೊಡುಗೆಗಳ ಕುರಿತು ಮತ್ತು ಮರಾಠ ಸಮುದಾಯದ ವ್ಯಕ್ತಿಗಳು ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಔದ್ಯಮಿಕ, ರಾಜಕೀಯ, ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ಪ್ರಮುಖ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳ ಕಿರು ಪರಿಚಯ ಹಾಗೂ ಚಿತ್ರವನ್ನು 2024ರ ಜನವರಿ 15ರೊಳಗೆ mdmarathanigama@gmail.com ಅಥವಾ ಮೊಬೈಲ್ ಸಂಖ್ಯೆ: +91 8867537799 / 9448590679 ವಾಟ್ಸಫ್ ಗೆ ನೀಡಬೇಕೆಂದು ಸಂಪಾದಕ ಮಂಡಳಿಯ ಸದಸ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಆರ್.ಪಾಗೋಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ