ನಾಳೆ ಶ್ರೀ ನಾರಾಯಣಗುರು ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

Upayuktha
0

 


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ನಾರಾಯಣಗುರು ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭವು ಜನವರಿ 21 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರ ತಾಲೂಕು ವಡ್ಡರ್ಸೆ ಯಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಶಂಕುಸ್ಥಾಪನೆ ನೆರವೇರಿಸಲಿದ್ದು, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹಾದೇವಪ್ಪ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ದಯಾನಂದ ಕೆ.ಎ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜು ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top