ಉಡುಪಿ: ದೊಡ್ಡಣ್ಣಗುಡ್ಡೆಯ ಪುಷ್ಪ ಹರಾಜು ಕೇಂದ್ರ ಫಲಪುಷ್ಪ ಪ್ರದರ್ಶನಕ್ಕೆ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಚಾಲನೆ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ದೊಡ್ಡಣ್ಣಗುಡ್ಡೆಯ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಲಾದ ಫಲಪುಷ್ಪ ಪ್ರದರ್ಶನಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರು ಶುಕ್ರವಾರ ಚಾಲನೆ ನೀಡಿದರು. 


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



ಉಡುಪಿ ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯ ಹಾಗೂ ಧ್ಯೇಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಚಾಲನೆ ನೀಡಿದರು. 


ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ರಾಜು ಮೊಗವೀರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top