ಸಿರಿಧಾನ್ಯಗಳ ಬಳಕೆಯಿಂದ ಉತ್ತಮ ಆರೋಗ್ಯ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Upayuktha
0



ಉಡುಪಿ: ಸಿರಿಧಾನ್ಯಗಳು ಉತ್ತಮ ಪೋಷಕಾಂಶಗಳನ್ನು ಹೊಂದುವುದರ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿವೆ. ಇವುಗಳ ಬಳಕೆಯಿಂದ ಜನಸಾಮಾನ್ಯರು ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.


ಅವರು ರವಿವಾರ ಮಲ್ಪೆ ಕಡಲ ತೀರದಲ್ಲಿ ಜಿಲ್ಲಾಡಳಿತ, ಜಿಲ್ಲ ಪಂಚಾಯತ್, ಕೃಷಿ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ - 2024 ರ ಅಂಗವಾಗಿ ಗ್ರಾಹಕರಲ್ಲಿ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಹಾಗೂ ಸಿರಿಧಾನ್ಯ ಆಹಾರ ಮಳಿಗೆಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಹಾಗೂ ವಿಶಿಷ್ಟ ಕೃಷಿಯಾಗಿದೆ. ಕಡಿಮೆ ಮಳೆ ಇದ್ದರೂ ಸಹ ಬೆಳೆಗಳನ್ನು ಬೆಳೆಯಬಹುದಾಗಿದೆ. ಇವುಗಳ ಬೆಳವಣಿಗೆಗೆ ರಾಸಾಯನಿಕ ಗೊಬ್ಬರಗಳ ಬಳಕೆ ಅವಶ್ಯಕತೆ ಕಡಿಮೆ ಇದೆ ಎಂದರು.


ಈ ಸಿರಿಧಾನ್ಯಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಹಾಗೂ ಇವುಗಳಿಂದ ತಯಾರಿಸಬಹುದಾದದ ಖಾದ್ಯಗಳು, ಅವುಗಳಲ್ಲಿರುವ ಪೌಷ್ಠಿಕತೆಯ ಬಗ್ಗೆ ಮನವರಿಕೆ ಮಾಡುವ ಕೆಲಸ ಇಲಾಖಾ ವತಿಯಿಂದ ಆಗಬೇಕು ಎಂದರು. 


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪೌರಾಯುಕ್ತ ರಾಯಪ್ಪ, ಕೃಷಿ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ನಾಯ್ಕ್, ಕೃಷಿ ವಿಜ್ಞಾನ ಕೇಂದ್ರದ ಧನಂಜಯ್, ಪೌರಾಯುಕ್ತ ರಾಯಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ನಿರೂಪಿಸಿದರೆ, ಯುವ ಸಬಕೀಲರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ವಂದಿಸಿದರು.


ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾತಂಡಗಳು ವಾದ್ಯವೃಂದದೊಂದಿಗೆ ಪ್ಯಾರಡೈಸ್ ಐಸ್ಲೆ ಹೋಟೆಲ್‍ನಿಂದ ಕಾರ್ಯಕ್ರಮದ ವೇದಿಕೆಯವರೆಗೆ ಸಿರಿಧಾನ್ಯಗಳ ಮಹತ್ವ ಸಾರುವ ಘೋಷವಾಕ್ಯಗಳೊಂದಿಗೆ ಸಿರಿಧಾನ್ಯ ನಡಿಗೆ ನಡೆಯಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top