ಜ.13 : ಉಡುಪಿ ಜಿಲ್ಲೆಯಲ್ಲಿ ಮಹನೀಯರ ಜಯಂತಿ

Upayuktha
0

 


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆಯು ಜನವರಿ 23 ರಂದು ಬೆಳಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಸಂಸದ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ.ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಯಶ್‌ಪಾಲ್ ಸುವರ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ) ಉಚ್ಚಿಲ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಮಂಜುನಾಥ್ ಭಟ್ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಅದಮಾರು ಪೂರ್ಣಪ್ರಜ್ಞ ಪಿ.ಯು ಕಾಲೇಜಿನ ಶಿಕ್ಷಕ ಜಿ.ಪಿ ಪ್ರಭಾಕರ ತುಮರಿ ಉಪನ್ಯಾಸ ನೀಡಲಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top