ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ಅಲ್ಲಿನ ಕೈದಿಗಳಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಸರಯೂ ಮಕ್ಕಳ ಮೇಳದ ವತಿಯಿಂದ ವೀರ ಜಾಂಬವ ಯಕ್ಷಗಾನ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯರನ್ನು ಗೌರವಿಸಲಾಯಿತು.
ಡಾ. ಪ್ರಖ್ಯಾತ್ ಶೆಟ್ಟಿ, ಅಳಿಕೆ, ಸ್ಕಂದ ಕೊನ್ನಾರ್, ಮಧುಸೂದನ ಅಲೆವೂರಾಯ, ವಿಜಯಲಕ್ಷ್ಮೀ ಎಲ್.ಎನ್. ವೀಣಾ. ಕೆ., ನಿಹಾಲ್ ಪೂಜಾರಿ ಮತ್ತು ಚಿರಾಗ್ ಶೆಟ್ಟಿ ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ.ಎಸ್., ಪತ್ರಕರ್ತ ಹರ್ಷ, ಜಿಲ್ಲಾ ಕಾರಾಗೃಹದ ಪೋಲೀಸ್ ನಿರ್ದೇಶಕರಾದ ಓಬಳೇಶಪ್ಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ