ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ, ತಂತ್ರಜ್ಞಾನ ಹಬ್ಬ ವರ್ಣೋತ್ಸವ: ವಿವೇಕಾನಂದ ಕಾಲೇಜ್ ಚಾಂಪಿಯನ್

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ವರ್ಣೋತ್ಸವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.




ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ಮಾರ್ಗದರ್ಶನದಲ್ಲಿ ಒಟ್ಟು 35 ವಿದ್ಯಾರ್ಥಿಗಳ ತಂಡವು ಇದರಲ್ಲಿ ಪಾಲ್ಗೊಂಡಿತ್ತು. ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು 5 ವಿಭಾಗಗಳಲ್ಲಿ ಪ್ರಥಮ ಹಾಗೂ 2 ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡು ಒಟ್ಟು ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.




ಇವರಿಗೆ ಭೂಮಿಕಾ ಕಲಾ ಸಂಘದ ಸಂಯೋಜಕರಾದ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಡಾ.ಶ್ವೇತಾಂಬಿಕಾ.ಪಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   





إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top