ದೇಶದ
ಸಂಸ್ಕೃತಿಯನ್ನು
ಜಗತ್ತಿಗೆ
ಸಾರಿದವರು
ವಿವೇಕಾನಂದರು
: ಸುಬ್ರಹ್ಮಣ್ಯ
ನಟ್ಟೋಜ
ಪುತ್ತೂರು : ಸ್ತ್ರೀಯರನ್ನು ಗೌರವಿಸಬೇಕಾದದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಆದರೆ ಇಂದಿನ ಸಮಾಜದಲ್ಲಿ ಸ್ತ್ರೀಯರು ಅನೇಕ ಶೋಷಣೆಗಳಿಗೆ ಒಳಗಾಗುತ್ತಿದ್ದಾರೆ. ಹೆಣ್ಣನ್ನು ಕಾಣುವಾಗ ಕಾಮ ಭಾವದ ಬದಲಾಗಿ ಸಹೋದರಿಯ ಭಾವನೆ ಮೂಡಬೇಕು. ಇದುವೇ ನಮ್ಮ ಹಿಂದು ಸಂಸ್ಕೃತಿ. ಈ ಹಿಂದೂ ಸಂಪ್ರದಾಯ, ಸಂಸ್ಕೃತಿಯನ್ನೇ ವಿದೇಶದಲ್ಲಿ ಪಸರಿಸಿದ ಅಗ್ಗಳಿಕೆಗೆ ಪಾತ್ರರಾದವರು ಸ್ವಾಮಿ ವಿವೇಕಾನಂದರು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮತನಾಡಿ ಸ್ವಾಮಿ ವಿವೇಕಾನಂದರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳುವುದು ಮುಖ್ಯ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು. ಸಭಾಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 9ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


