ನಡ ಸರಕಾರಿ ಪ.ಪೂ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Upayuktha
0


ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ನಡ ಸರಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ಇಂದು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.


ರೇಂಜರ್ಸ್ ವಿದ್ಯಾರ್ಥಿನಿಯರಿಗೆ ರಸ ಪ್ರಶ್ನೆ ಸ್ಪರ್ಧೆ ಹಾಗೂ ಏಕಾಗ್ರತೆ ಪರೀಕ್ಷಣಾ ಸ್ಪರ್ಧೆಗಳನ್ನು ನಡೆಸಲಾಯಿತು. ಬಳಿಕ ಏರ್ಪಡಿಸಿದ್ದ ಸಭೆಯಲ್ಲಿ ರೇಂಜರ್ ಲೀಡರ್ ವಸಂತಿ ಪಿ. ಇವರು ವಿವೇಕಾನಂದರ  ತ್ಯಾಗ ಸೇವೆಗಳನ್ನು ಉದಾಹರಣೆ ಸಹಿತ ವಿವರಿಸಿ, ಅವರ ಆದರ್ಶಗಳನ್ನು ಅನುಸರಿಸುವಂತೆ ಕರೆ ನೀಡಿದರು.


ಅಸ್ಮಿತಾ ಹಾಗೂ ಯಕ್ಷಿತಾ ವಿವೇಕಾನಂದರ ಬಗ್ಗೆ ಮಾತನಾಡಿದರು. ಸುಪ್ರೀತಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ನಿಕಿತಾ ಸ್ವಾಗತಿಸಿ ಸುದೀಕ್ಷಾ ವಂದಿಸಿದಳು. ಪ್ರಾಂಶುಪಾಲ ಚಂದ್ರಶೇಖರ್ ಇವರ ಮಾರ್ಗದರ್ಶನದಲ್ಲಿ ಎಲ್ಲಾ ಉಪನ್ಯಾಸಕರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top