ಶಿಡ್ಲಘಟ್ಟ : 75ನೇ ಗಣರಾಜ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥ ರಥೋತ್ಸವ ಎಸ್. ದೇವಗಾನಹಳ್ಳಿ ಗ್ರಾಮಕ್ಕೆ ಶುಕ್ರವಾರ ಆಗಮಿಸಿದಾಗ ಎಸ್.ದೇವಗಾನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸ್ಥಳೀಯ ಎಲ್ಲಾ ಅಧಿಕಾರಿಗಳು ಡಾ.ಬಿ ಆರ್ ಅಂಬೇಡ್ಕರ್ ಪುಥಳಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ಸಾರ್ವಜನಿಕರು ಕೂಡಿ ಸಂಭ್ರಮದ ಸ್ವಾಗತ ಕೋರಿದರು.
ಎಸ್. ದೇವಗಾನಹಳ್ಳಿಯ ಸರ್ಕಾರಿ ಶಾಲೆಯ ಮಕ್ಕಳು ವಿವಿಧ ಬಗೆಯ ವೇಷ ಭೂಷಣಗಳು ಜಾಥ ಮೆರವಣಿಗೆಗೆ ಮೆರಗು ತಂದು ಕೊಟ್ಟವು. ಮಹಿಳೆಯರು ಹೆಣ್ಣು ಮಕ್ಕಳು ಕುಂಭಹೊತ್ತ ಸುಮಂಗಲೆಯರು ಮತ್ತು ವಿವಿಧ ಸಂಘಟನೆ ಗಳ ಪ್ರಮುಖರು ಗ್ರಾಮಸ್ಥರು ಸಂವಿಧಾನ ಜಾಗೃತಿ ಜಾಥ ಮೆರವಣಿಗೆ ಯಲ್ಲಿ ಭಾಗಿಯಾದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿತು. ಎಸ್.ದೇವಗಾನಹಳ್ಳಿ ಗ್ರಾಮದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ವನ್ನು ಪ್ರಾರ್ಥನೆ, ನಾಡಗೀತೆ ಹಾಗೂ ದೀಪ ಬೆಳಗಿಸುವ ಮೂಲಕ ವೇದಿಕೆಯ ಕಾರ್ಯಕ್ರಮ ವನ್ನು ಚಾಲನೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಭೋಧಿಸಿದರು. ಇನ್ನೂ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇದ್ದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ