ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ನಡುವೆ ಒಪ್ಪಂದ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನಡುವಣ ಯೋಗ ಶಿಕ್ಷಣದ ಕುರಿತಾದ ಒಪ್ಪಂದ ಮಾಡಿಕೊಳ್ಳಲಾಯಿತು. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ರವಿಶಂಕರ ಗುರೂಜಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.


ಕಳೆದ ಹದಿನಾಲ್ಕು ವರ್ಷಗಳಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮೂಲಕ ಯೋಗಶಿಕ್ಷಣವನ್ನು ಒದಗಿಸಿಕೊಡಲಾಗುತ್ತಿದೆ. ಪ್ರತಿ ವರ್ಷವೂ ಶೈಕ್ಷಣಿಕ ಚಟುವಟಿಕೆಗಳ ಆರಂಭದ ದಿನಗಳಲ್ಲಿ ಮೂಲಭೂತ ಯೋಗ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ಕಾರ್ಯವನ್ನು ಅಂಬಿಕಾ ಸಂಸ್ಥೆಗಳು ಮಾಡಿಕೊಂಡು ಬರುತ್ತಿವೆ. ಇದಲ್ಲದೆ ಪ್ರತಿನಿತ್ಯ ತರಗತಿ ಆರಂಭಕ್ಕೂ ಮುನ್ನ ನಿಗದಿತ ಸಮಯದ ಯೋಗಾಭ್ಯಾಸವನ್ನು ನಡೆಸಲಾಗುತ್ತಿದೆ. ಪಠ್ಯಕ್ರಮದಲ್ಲಿ ಯೋಗವನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ಸಂಸ್ಥೆಯಾಗಿ ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳು ದಾಖಲೆ ಬರೆದಿವೆ. ಇದೀಗ ಆರ್ಟ್ ಆಫ್ ಲಿವಿಂಗ್ ಹಾಗೂ ಅಂಬಿಕಾ ಸಂಸ್ಥೆಗಳ ನಡುವೆ ಅಧಿಕೃತ ಒಪ್ಪಂದ ನಡೆದಿದ್ದು, ಮುಂದಿನ ದಿನಗಳಲ್ಲಿ ಅಂಬಿಕಾ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಯೋಗಾಭ್ಯಾಸ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top