ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇವರ ನೇತೃತ್ವದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 3ರ ತನಕ ನಡೆಯಲಿರುವ ಋಕ್ ಸಂಹಿತಾ ಯಾಗ ಮತ್ತು ಸಹಸ್ರ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರಿಗೆ ನೀಡಿ ಆಶೀರ್ವಾದವನ್ನು ಪಡೆಯಲಾಯಿತು.
ಕಾಟುಕುಕ್ಕೆ ಶ್ರೀ ಸುಬ್ರಾಯ ದೇವರ ಸನ್ನಿಧಿಯಲ್ಲಿ ಶುಕ್ರವಾರ ಜರಗಿದ ಶ್ರೀ ಪುರಂದರದಾಸ ಆರಾಧನೋತ್ಸವದ ಸಂದರ್ಭದಲ್ಲಿ ಯಾಗ ಸಮಿತಿಯ ಪದಾಧಿಕಾರಿಗಳು ಶ್ರೀಗಳನ್ನು ಭೇಟಿಯಾದರು. ಯಾಗವು ಸಾಂಗವಾಗಿ ನೆರವೇರಲಿ ಎಂದು ಅವರು ಶುಭನುಡಿಗಳನ್ನಾಡಿ ಮಂತ್ರಾಕ್ಷತೆಯನ್ನಿತ್ತು ಹರಸಿದರು.
ಅಗಲ್ಪಾಡಿ ಶ್ರೀಕ್ಷೇತ್ರದ ಮೊಕ್ತೇಸರ ಉಪ್ಪಂಗಳ ವಾಸುದೇವ ಭಟ್, ಸಮಿತಿಯ ಕಾರ್ಯದರ್ಶಿ ಪುರುಷೋತ್ತಮ ಪ್ರಸಾದ್ ಪಾರ್ತಕೊಚ್ಚಿ, ವೈದಿಕರಾದ ಶಿರಂತಡ್ಕ ಶ್ರೀನಿವಾಸ ಪ್ರಸಾದ್, ತೋಟದಮೂಲೆ ಗಣಪತಿ ಭಟ್, ಮುಜೂರು ರಾಜಣ್ಣ ಮೊದಲಾದವರು ಜೊತೆಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ