ಎಪ್ರಿಲ್‌ನಲ್ಲಿ ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ

Upayuktha
0

 ಅಂಬಿಕಾ ವಿದ್ಯಾಲಯದ ದಶಮಾನೋತ್ಸವ ಸಮಾರೋಪ ಹಾಗೂ ಶಿವಕೃಪಾ ಲೋಕಾರ್ಪಣೆ



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ – ದಶಾಂಬಿಕೋತ್ಸವದ ಸಮಾರೋಪ ಸಮಾರಂಭ ಎಪ್ರಿಲ್ 25ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶೃಂಗೇರಿ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ದಿವ್ಯಾಶೀರ್ವಾದ ಸಹಿತ ತತ್ಕರ ಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭಾಗವಹಿಸಲಿದ್ದಾರೆ. 


ಎಪ್ರಿಲ್ 24ರಂದು ಸ್ವಾಮೀಜಿಯವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಪುತ್ತೂರಿಗೆ ಬರಮಾಡಿಕೊಳ್ಳಲಾಗುತ್ತದೆ. ಅದೇ ದಿನ ಸಂಜೆ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಶ್ರೀ ಚಂದ್ರಮೌಳೀಶ್ವರ ಪೂಜೆಯನ್ನು ಸ್ವಾಮೀಜಿಯವರು ನೆರವೇರಿಸಲಿದ್ದು, ತದನಂತರ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ನಟ್ಟೋಜ ಅವರ ನಿವಾಸದಲ್ಲಿ ಮೊಕ್ಕಾಂ ಹೂಡಲಿದ್ದಾರೆ. ಎಪ್ರಿಲ್ 25ರಂದು ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಲಿದ್ದಾರೆ. 



ಶಿವಕೃಪಾ ಸಭಾಂಗಣ ಲೋಕಾರ್ಪಣೆ: ಎಪ್ರಿಲ್ 25ರಂದು ಸಂಜೆ ಕಲ್ಲಾರೆಯಲ್ಲಿ ಶಿವಬ್ರಾಹ್ಮಣ ಸಮಾಜಸೇವಾ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶಿವಕೃಪಾ ಸಭಾಂಗಣವನ್ನು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಲೋಕಾರ್ಪಣೆಗೈಯಲಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top