ಸುಧೀಂದ್ರನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 'ದಾಸರ ಪದಗಳ ಅಂತ್ಯಾಕ್ಷರಿ'

Upayuktha
0



ಬೆಂಗಳೂರು: ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಪುರಂದರದಾಸರ ಆರಾಧನೋತ್ಸವದ ಪ್ರಯುಕ್ತ ಫೆಬ್ರವರಿ 3 ರಂದು ಏರ್ಪಡಿಸಿದ್ದ "ದಾಸರ ಪದಗಳ ಅಂತ್ಯಾಕ್ಷರಿ" ಕಾರ್ಯಕ್ರಮವನ್ನು ನಾಡಿನ ಹೆಸರಾಂತ ಕಲಾವಿದರುಗಳಾದ ವಿ||  ರಾಯಚೂರು ಶೇಷಗಿರಿದಾಸ್, ವಿ|| ಭಾರ್ಗವಿ ಗುಡಿ, ವಿ|| ಅನಂತ ಕುಲಕರ್ಣಿ, ವಿ|| ದಿವ್ಯಾ ಗಿರಿಧರ್ ಮತ್ತು ಸಂಗಡಿಗರು ನಡೆಸಿಕೊಟ್ಟರು. 



ಈ ಕಾರ್ಯಕ್ರಮದ ನಿರೂಪಣೆಯನ್ನು ಹರಿದಾಸ ಸಂಪದ ಟ್ರಸ್ಟಿನ ಗೌರವ ಕಾರ್ಯದರ್ಶಿ ಎಂ. ವಿ. ಮಧುಸೂದನ್ ನಿರ್ವಹಿಸಿದರು. ಮಲ್ಲೇಶ್ವರದಲ್ಲಿ ಪ್ರಪ್ರಥಮವಾಗಿ ಆಯೋಜಿಸಿದ್ದ ಈ ವಿಶೇಷ  ಕಾರ್ಯಕ್ರಮದಲ್ಲಿ ದಾಸ ಸಾಹಿತ್ಯಾಭಿಮಾನಿಗಳು ಕಿಕ್ಕಿರಿದು ನೆರೆದಿದ್ದರು. ಈ ಕಾರ್ಯಕ್ರಮದ ನೇತೃತ್ವವನ್ನು ವಿ|| ಅನಂತಕುಲಕರ್ಣಿ ಅವರು ವಹಿಸಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top