ಶಿವಮೊಗ್ಗ: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಪೂರ್ವಭಾವಿಯಾಗಿ ಕರೆದಿದ್ದ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಭಾಗವಹಿಸಿ ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ, ಬರಗಾಲಕ್ಕೆ ಎಕರೆಗೆ-20ಸಾವಿರ ಪರಿಹಾರ, ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದು ಮಾಡುವ ಬಗ್ಗೆ ಒತ್ತಾಯಿಸಿದರು.
ವಿದ್ಯುತ್ ಖಾಸಗೀಕರಣ ಮಾಡಬಾರದು ಮತ್ತು IP ಸೆಟ್ ಗಳನ್ನ ರೈತರೆ ಸ್ವಯಂ ವೆಚ್ಚದಲ್ಲಿ ಹಾಕಿಸಿಕೊಳ್ಳುವುದನ್ನು ಹಿಂಪಡೆಯುವುದು, ಕಬ್ಬಿನ ಬಾಕಿ ಹಣ ಕೊಡಿಸುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು ಇನ್ನೂ ರೈತರ ಅನೇಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಚರ್ಚಿಸಿ ಪರಿಹರಿಸುವಂತೆ ಒತ್ತಾಯಿಸಲಾಯಿತು.
ಈ ಸಂಧರ್ಭದಲ್ಲಿ ಸಚಿವರುಗಳಾದ ಶಿವಾನಂದ ಪಾಟೀಲ್, ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳು ಹಾಗೂ ರೈತ ಸಂಘಟನೆ ಪ್ರಮುಖ ಮುಖಂಡರು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







